
ಮಡಿಕೇರಿ: ಬಿಸಿಲಝಳದ ನಡುವೆ ಕಾಡ್ಗಿಚ್ಚು, ಬೆಂಕಿ ಅವಘಡ ಪ್ರಕರಣಗಳು ಹೆಚ್ಚುತ್ತಿವೆ. ಕೊಡಗು ಜಿಲ್ಲೆಯ ಮಡಿಕೇರಿಯ ಮಲ್ಮ, ಇಗ್ಗುತಪ್ಪ, ನಾಲಾಡಿ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ.
ನಿನ್ನೆ ಸಂಜೆಯಿಂದ ಕಾಣಿಸಿಕೊಂಡಿರುವ ಕಾಡ್ಗಿಚ್ಚು ಸುತ್ತಮುತ್ತಲಿನ ಅರಣ್ಯ ಪ್ರದೇಶಕ್ಕೂ ವ್ಯಾಪಿಸುತ್ತಿದ್ದು, ವನ್ಯಸಂಪತ್ತು ಬೆಂಕಿಗಾಹುತಿಯಾಗಿವೆ.
ಮಡಿಕೇರಿ, ಭಾಗಮಂಡಲ ವಲಯ ಅರಣ್ಯ ಅಧಿಕಾರಿ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 20 ಎಕರೆಗೂ ಹೆಚ್ಚು ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ.