HomeKarnatakaBREAKING : ರಾಜ್ಯದ ಹೋಟೆಲ್'ಗಳಲ್ಲಿ ಇನ್ಮುಂದೆ 'ಪ್ಲಾಸ್ಟಿಕ್' ಬಳಕೆ ನಿಷೇಧ : ಸಚಿವ ದಿನೇಶ್ ಗುಂಡೂರಾವ್

BREAKING : ರಾಜ್ಯದ ಹೋಟೆಲ್’ಗಳಲ್ಲಿ ಇನ್ಮುಂದೆ ‘ಪ್ಲಾಸ್ಟಿಕ್’ ಬಳಕೆ ನಿಷೇಧ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ಉಪಹಾರ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಹೋಟೆಲ್, ರಸ್ತೆಬದಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ.  ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ   ಹಾಕುವ ಬಗ್ಗೆ ಮುನ್ನೆಚ್ಚರಿಕೆ   ಕ್ರಮಗಳ ಬಗ್ಗೆ ಇನ್ನೆರಡು ದಿನದಲ್ಲಿ  ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಇಡ್ಲಿಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ವರದಿಯೊಂದು ಆಘಾತಕಾರಿ ವಿಚಾರ ಬಯಲು ಮಾಡಿದೆ.
ಇಡ್ಲಿ ಹಲವರಿಗೆ ಅಚ್ಚುಮೆಚ್ಚು. ರಸ್ತೆ ಬದಿ, ಹೋಟೆಲ್, ಅಂಗಡಿಗಳಲ್ಲಿ ಮಾರಾಟವಾಗುವ ಇಡ್ಲಿ ಖರೀದಿಸುವ ಮುನ್ನ ನೀವು ಎಚ್ಚರವಹಿಸಬೇಕು.ಹೌದು, ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ. ಈ ಹಿನ್ನೆಲೆ ಆರೋಗ್ಯ ಸಚಿವರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular