
ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಮೇಲೆ ಡಿಢೀರ್ ದಾಳಿ ನಡೆಸಿದ್ದಾರೆ.
ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ನಿವಾಸ, ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಲೆ ಗೋಕಾಕ್ ಗ್ರೇಡ್ 2 ತಹಶೀಲ್ದಾರ್ ಶ್ರೀಕಾಂತ್ ಬೆಟಗೇರಿ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈ ಎಸ್ ಪಿ ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸುಕನ್ಯಾ ಸಮೃದ್ಧಿ ಯೋಜನೆ, ಪಿಂಚಣಿ ಮಂಜೂರಾತಿಯಲ್ಲಿ ಭ್ರಷ್ತಾಚಾರ ನಡೆಸಿರುವ ಆರೋಪ ಕೇಳಿಬಂದಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.