
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚಿಸಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚಿಸಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಬಿಜೆಪಿಯ ಪಿ.ರಾಜೀವ್, ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಅರ್ಜಿ ಪ್ರತಿವಾದಿಗಳಾದ ಸಮಿತಿ ಸದಸ್ಯರಿಗೆ ನೋಟಿಸ್ ಜಾರಿ ಮಾಡಿದೆ.
ಬಳಿಕ ಅರ್ಜಿ ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.