
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಅಂಕಪಟ್ಟಿ ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ನೀಡಿದ್ದ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಂಡಿದ್ದು, ದೆಹಲಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ದೆಹಲಿ ವಿಸ್ವವಿದ್ಯಾಲಯದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಐಸಿ ಆದೇಶ ರದ್ದುಪಡಿಸುವಂತೆ ವಾದ ಮಾಂಡಿಸಿದರು. ಆದರೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸುವ ಬಗ್ಗೆ ಯಾವುದೇ ಆಕ್ಷೇಪವಿಲ್ಲ ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾ. ಸಚಿನ್ ದತ್ತಾ, ತೀರ್ಪು ಕಾಯ್ದಿರಿಸಿದ್ದಾರೆ.
ಕೇಂದ್ರ ಮಾಹಿತಿ ಆಯೋಗ-ಸಿಐಸಿ 1978ರಲ್ಲಿ ಬಿಎ ಪರೀಕ್ಷೆಯಲ್ಲಿ ಪಾಸ್ ಆದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವಂತೆ 2016ರ ಡಿಸೆಂಬರ್ 21ರಂದು ಆದೇಶ ನೀಡಿತ್ತು. ಅದೇ ವರ್ಷ ಪ್ರಧಾನಿ ಮೋದಿ ಕೂಡ ಅದರಲ್ಲಿ ಉತ್ತೀರ್ಣರಾಗಿದ್ದರು. 2017ರ ಜನವರಿ 23ರಂದು ಸಿಐಸಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.