
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಬೆಂಬಲಿಗರೊಂದಿಗೆ ಯಡಿಯೂರಪ್ಪ ಬೆಂಗಳೂರಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ನಾಯಕರು ಯಡಿಯೂರಪ್ಪ ಅವರಿಗೆ ಶುಭಾಶಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡ ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಿದ್ದಾರೆ. ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಇನ್ನೂ ಹೆಚ್ಚಿನ ಆಯಸ್ಸು, ಉತ್ತಮ ಆರೋಗ್ಯವನ್ನು ಕೊಟ್ಟು ಭಗವಂತ ತಮಗೆ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಶುಭ ಹಾರೈಸಿದ್ದಾರೆ.
ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಇನ್ನೂ ಹೆಚ್ಚಿನ ಆಯಸ್ಸು, ಉತ್ತಮ ಆರೋಗ್ಯವನ್ನು ಕೊಟ್ಟು ಭಗವಂತ ತಮಗೆ ಕರುಣಿಸಲಿ ಎಂದು ಹಾರೈಸುತ್ತೇನೆ. pic.twitter.com/CUQrFZosT2— Siddaramaiah (@siddaramaiah) February 27, 2025