
ಕೊಪ್ಪಳ: ಮಹಿಳಾ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಪುತ್ರ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮಾಗೇರಿ ಗ್ರಾಮ ಪಂಚಾಯಿತಿಯಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಿಡಿಒ ರತ್ನಮ್ಮ ಗುಂಡಣ್ಣನವರ ಮೇಲೆ ಹಲ್ಲೆ ನಡೆಸಲಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಂಡರ, ಪುತ್ರ ಭೀಮೇಶ್ ಹಲ್ಲೆ ಮಾಡಿದ್ದಾರೆ. ತಾಯಿ ಹೆಸರಲ್ಲಿ ಇದ್ದ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.