ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ನೆರೆಮನೆಯ 17 ವರ್ಷದ ಯುವಕ ಗೋಡೆಗೆ ಹೊಡೆದು, ಕಚ್ಚಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಬಾಲಕಿಯನ್ನು ಗ್ವಾಲಿಯರ್ನ ಕಮಲಾ ರಾಜಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆಯ ಖಾಸಗಿ ಭಾಗಗಳಿಗೆ 28 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿ ತಿಳಿಸಿದೆ.
ಸಂತ್ರಸ್ತೆ ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಮತ್ತು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ವೈದ್ಯಕೀಯ ಪರೀಕ್ಷೆಯಲ್ಲಿ, ವೈದ್ಯರು ಬಾಲಕಿಯ ಖಾಸಗಿ ಭಾಗಗಳು ಮತ್ತು ಮುಖದ ಮೇಲೆ ತೀವ್ರವಾದ ಕಚ್ಚಿದ ಗುರುತುಗಳನ್ನು ಗುರುತಿಸಿದ್ದಾರೆ. ವೈದ್ಯರ ಪ್ರಕಾರ, ಬಾಲಕಿಯನ್ನು ಆಸ್ಪತ್ರೆಗೆ ಕರೆತಂದಾಗ ಆಕೆಯ ಸ್ಥಿತಿ ಭೀಕರವಾಗಿತ್ತು. ಬಾಲಕಿಯ ಖಾಸಗಿ ಭಾಗಗಳಿಗೆ ತೀವ್ರ ಹಾನಿಯಾಗಿದೆ, ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.