
ತುಮಕೂರು: ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಯುವತಿಯ ಬ್ಯಾಗ್, ಮೊಬೈಲ್, ಬಸ್ ಟಿಕೆಟ್, ಚಪ್ಪಲಿ ಪತ್ತೆಯಾಗಿದ್ದು, ಯುವತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಗೈರಬಹುದು ಎಂದು ಶಂಕಿಸಲಾಗಿದೆ.
ಕುಣಿಗಲ್ ಮೂಲದ ಸುಮಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಳು. ನಿನ್ನೆ ಊರಿಗೆ ಬರುವುದಗಿ ಹೇಳಿ ಕುಣಿಗಲ್ ನ ಗ್ರಾಮಕ್ಕೆ ಹೋಗಿದ್ದಳು. ಆದರೆ ಈಗ ಆಕೆಯ ಬ್ಯಾಗ್, ಮೊಬೈಲ್, ಬಸ್ ಟಿಕೆಟ್ ಗಳು ಕೆರೆಯ ದಡದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಮುಳುಗು ತಜ್ಞರು ಭೇಟಿ ನೀಡಿ ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶೀಧ ಕಾರ್ಯಾಚರಣೆಗೆ ಶಾಸಕ ರಂಗನಾಥ್ ಕೂಡ ಸಾಥ್ ನೀಡಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಯುವತಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.