ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ವರ್ಲಿ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಗುರುವಾರ ವಾಟ್ಸಾಪ್ ಸಂದೇಶ ಕಳುಹಿಸಲಾಗಿದ್ದು, ಸಿಎಂ ಕಚೇರಿಯ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.