
ತಿರುವನಂತಪುರಂ: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂ ಬಳಿ ನಡೆದಿದೆ.
ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕೊಟ್ಟಾಯಂ-ನೀಲಂಬೂರ್ ರೈಲು ಎರ್ನಾಕುಲಂ ಕಡೆಗೆ ಚಲಿಸುತ್ತಿದ್ದ ವೇಳೆ ಮೂವರು ಮಹಿಲೆಯರು ರೈಲಿನ ಮುಂದೆ ಹಾರಿದ್ದಾರೆ ಎನ್ನಲಾಗಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಯಿತು.