ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಮಂಗಳೂರಿಗೆ ಆಗಮಿಸಿದ್ದು, ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಶಿಲ್ಪಾ ಶೆಟ್ಟಿ ತಾಯಿ, ಸಹೋದರಿ ಹಾಗೂ ಮಗ ಕೂಡ ಉಪಸ್ಥಿತರಿದ್ದರು.
ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಶಿಲ್ಪಾ ಶೆಟ್ಟಿ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಡ್ಲದ ಬೆಡಗಿಯಾಗಿರುವ ಶಿಲ್ಪಾ ಶೆಟ್ಟಿ ಆಗಾಗ ಮಂಗಳೂರಿಗೆ ಬಂದಾಗಲೆಲ್ಲ ದುರ್ಗಾ ಪರಮೇಶ್ವರಿ ದರ್ಶನ ಪಡೆಯುವುದು ವಿಶೇಷ.