
ರಂಜಾನ್ ಹಬ್ಬಕ್ಕೂ ಮುನ್ನ ವಾಯುವ್ಯ ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ.
ವಾಯುವ್ಯ ಪಾಕಿಸ್ತಾನದ ಮಸೀದಿಯೊಂದರಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 5 ಜನರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಂಜಾನ್ ಉಪವಾಸ ಮಾಸಕ್ಕೂ ಮುನ್ನ ಈ ಘಟನೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ದೌಡಾಯಿಸಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಜಿಲ್ಲೆಯ ಅಕ್ಕೋರಾ ಖಟ್ಟಕ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಶೀದ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಮೃತರು ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.