
ಬೆಂಗಳೂರು: ನಾಲ್ವರು ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದೇಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಕಾರು ನಿಲ್ಲಿಸಿ ತಕ್ಷಣ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಧವೈಸಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.