
ತುಮಕೂರು: ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಜಿಲ್ಲೆಯ ಕುಣಿಗಲ್ ದೊಡ್ಡಕೆರೆಯ ಬಳಿ ಯುವತಿಯ ಬ್ಯಾಗ್, ಮೊಬೈಲ್, ಬಸ್ ಟಿಕೆಟ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕೆರೆಯಲ್ಲಿ ಶೋಧ ನಡೆಸಲಾಗಿದ್ದು, ಈ ವೇಳೆ ಯುವತಿಯ ಶವ ಪತ್ತೆಯಾಗಿದೆ.
ಕುಣಿಗಲ್ ನ ಸೊಬಗಾನಹಳ್ಳಿ ಗ್ರಾಮದ ಸುಮಾ(25) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಸುಮಾ, ನಿನ್ನೆ ಊರಿಗೆ ಹೋದವಳು ಬೆಂಗಳೂರಿಗೆ ವಾಪಾಸ್ ಆಗಿಲ್ಲ. ಇದೀಗ ಕುಣಿಗಲ್ ಕೆರೆಯಲ್ಲಿ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಯುವತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.