alex Certify ಇನ್ನು ಮುಂದೆ ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ‘ಕನ್ನಡ’ ಲೇಬಲ್ ಕಡ್ಡಾಯ: ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ಮುಂದೆ ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ‘ಕನ್ನಡ’ ಲೇಬಲ್ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.

ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆ ಕುರಿತದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆ ಹೊರಡಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಧಿನಿಯಮ 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು. ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...