
ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 09 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ 05 ತುರ್ತು ಚಿಕಿತ್ಸ ವೈದ್ಯಾಧಿಕಾರಿ ಮತ್ತು 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಮಾರ್ಚ್ 25, 2025 ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡ – 580008 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.