ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಮಾ. 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ.
ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಬಸ್ ಪಾಸ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.