
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಗ್ರೂಪ್ ಸಿ ಹುದ್ದೆಗಳಿಗೆ ಮಾರ್ಚ್ 15ರಂದು ನಡೆಸಲು ಉದ್ದೇಶಿಸಿದ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ.
ಇತ್ತೀಚೆಗೆ ನಡೆಸಲಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗಿದ್ದು, ಅದರ ಫಲಿತಾಂಶ ಶೀಘ್ರವೇ ಪ್ರಕಟವಾಗಲಿದೆ.
ಆ ಪರೀಕ್ಷೆಗಳಿಗೆ ಹಾಜರಾಗಿದ್ದ ಅನೇಕ ಅಭ್ಯರ್ಥಿಗಳೂ ಈ ಪರೀಕ್ಷೆಗಳಿಗೂ ಕೂಡ ಅಭ್ಯರ್ಥಿಗಳಾಗಿದ್ದಾರೆ. ಅವರು ಮತ್ತೊಮ್ಮೆ ಕನ್ನಡ ಭಾಷಾ ಪರೀಕ್ಷೆ ಬರೆಯುವುದರಿಂದ ಆಯೋಗಕ್ಕೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೆಚ್ಚಿನ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮುಂದೂಡಲಾಗಿದೆ. ಮಾರ್ಚ್ 16ರ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.