
ನವದೆಹಲಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕನ ಕಾರಿನ ಚಕ್ರಗಳನೇ ಕಳ್ಳರು ಕದ್ದೊಯ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಆಪ್ ನಾಯಕ ಅವಧ್ ಓಜಾ, ದೆಹಲಿಯ ಲತ್ಪರ್ಗಂಜ್ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದರು. ಹಾಡಹಗಲೇ ಕಾರಿನ ನಾಲ್ಕು ಚಕ್ರಗಳನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಅತಿ ಹೆಚ್ಚು ಜನರು ಓಡಾಡುವ ಪ್ರದೇಶದಲ್ಲೇ ಕಳ್ಳರು ಈ ಕೃತವೆಸಗಿದ್ದಾರೆ. ಹಡಹಗಲೇ ಜನನಿಬಿಡ ಪ್ರದೇಶದಲ್ಲಿ ತಮ್ಮ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳರು ಕದ್ದೊಯ್ಯಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.