
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಪರಂಗಿಪೇಟೆ ಬಂದ್ ಗೆ ಕರೆ ನೀಡಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ದಿಗಂತ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಫೆ.25ರಂದು ಸಂಜೆ 7 ಗಂಟೆಗೆ ಮನೆಯಿಂದ ಹೊರ ಹೋದವನು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ವಿದ್ಯಾರ್ಥಿ ನಾಪತ್ತೆಯಾಗಿ ಐದು ದಿನಗಳು ಕಳೆದರೂ ಪೊಲೀಸರು ವಿದ್ಯಾರ್ಥಿಯ ಬಗ್ಗೆ ಪತ್ತೆ ಮಾಡಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯವಾಗಿದೆ ಎಂದು ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಇಂದು ಪರಂಗಿಪೇಟೆ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿ ಪತ್ತೆಮಾಡದಿದ್ದಲ್ಲಿ ಹೋರಾಟ ಇನ್ನಷ್ಟು ಉಗ್ರ ಸ್ವರೂಪ ಪಡೆಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿ ನಾಪತ್ತೆಯಾದ ದಿನ ರಾತ್ರಿ ಪರಂಗಿಪೇಟೆ ಸರ್ಕಲ್ ಬಳಿ ಅನುಮಾನಾಸ್ಪದ ಕ್ವಾಲಿಸ್ ವಾಹನವೊಂದು ಓದಾಟ ನಡೆಸಿದೆ. ವಿದ್ಯಾರ್ಥಿ ನಾಪತ್ತೆ ಹಿಂದೆ ಗಾಂಜಾ ಗುಂಪಿನ ಕೈವಾಡ ಶಂಕೆ ಇದೆ. ಅಷ್ಟೇ ಅಲ್ಲ ಹೈವೆಯಲ್ಲಿ ವಿದ್ಯಾರ್ಥಿಯ ಚಪ್ಪಲಿ ಪತ್ತೆಯಾಗಿದ್ದು, ಅದರ ಮೇಲೆ ರಕ್ತದ ಕಳೆಗಳು ಇದ್ದು, ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. 5 ದಿನಗಳಿಂದ ವಿದಾರ್ಥಿ ನಾಪತ್ತೆಯಗೈದ್ದರೂ ಈವರೆಗೂ ಆತನ ಸುಳಿವು ಸಿಕ್ಕಿಲ್ಲ. ಇದು ಪೊಲೀಸ್ ಇಲಾಖೆಯ ಬೇಜವಾಬ್ದಾರಿ ವರ್ತನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.