
ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ. 19 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರಲ್ಲಿ ಮೂವರ ಗುರುತು ಪತ್ತೆಯಾಗಿದ್ದು, ಓರ್ವರ ಗುರುತು ಪತ್ತೆಯಾಗಿಲ್ಲ. ರಾಜಸ್ಥಾನದ ಗೋವಿಂದ್ (68), ರಮೇಶ್ (45), ಆಗ್ರಾದ ದೀಪಕ್ ವರ್ಮಾ (40) ಮೃತರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.