
ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಗುರು ಎಂಬಾತ ಕುಡಿದ ಮತ್ತಿನಲ್ಲಿ ಮನೆಯವರ ಜೊತೆ ಗಲಾಟೆ ಮಾಡಿ, ಬೀಡಿ ಸೇದಿ, ಬೀಡಿಯನ್ನು ಬೆಡ್ ಮೇಲೆ ಇಟ್ಟಿದ್ದ. ಹಾಸಿಗೆಗೆ ಹೊತ್ತಿಕೊಂಡಿದ್ದ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ಮನೆಯವರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿದ್ದು, ಕ್ಷಣಾರ್ಧದಲ್ಲಿ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ಬಟ್ಟೆ, ದವಸ, ಧಾನ್ಯ, ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.