alex Certify BIG NEWS: ಅಂಬಾಲಾ ಕೋರ್ಟ್ ಆವರಣದಲ್ಲಿ ಗುಂಡಿನ ಸದ್ದು; ಆತಂಕದಿಂದ ಓಡಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಬಾಲಾ ಕೋರ್ಟ್ ಆವರಣದಲ್ಲಿ ಗುಂಡಿನ ಸದ್ದು; ಆತಂಕದಿಂದ ಓಡಿದ ಜನ

ಹರಿಯಾಣದ ಅಂಬಾಲಾ ಕೋರ್ಟ್ ಆವರಣದಲ್ಲಿ ಇಂದು ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಭೀತಿ ಉಂಟಾಗಿದೆ.

ಅಂಬಾಲಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ರಜತ್ ಗುಲಿಯಾ ಅವರ ಪ್ರಕಾರ, ಆರೋಪಿಗಳು ಕೋರ್ಟ್‌ಗೆ ಹಾಜರಾಗಲು ಬಂದಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಲು ಬಂದಿದ್ದರು. ಈ ಘಟನೆಯ ಹಿಂದೆ ಹಳೆಯ ವೈಷಮ್ಯವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ವ್ಯಕ್ತಿಗಳು ಎಸ್‌ಯುವಿಯಲ್ಲಿ ಬಂದಿದ್ದು, ಗುಂಡು ಹಾರಿಸಿದ ನಂತರ ಅವರು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಘಟನಾ ಸ್ಥಳದಿಂದ ಮೂರು ಖಾಲಿ ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...