BIG NEWS: ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ; FSSAI ನಿಂದ ತನಿಖೆಗೆ ಆದೇಶ

ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಈ ಬಗ್ಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತನಿಖೆಗೆ ಆದೇಶಿಸಿದೆ.

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ವಿಷಯದ ಬಗ್ಗೆ ತಕ್ಷಣವೇ ಗಮನಹರಿಸುವಂತೆ ಮತ್ತು ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು FSSAI ಪ್ರಕಟಣೆ ತಿಳಿಸಿದೆ.

ಈ ವಿಷಯದ ಬಗ್ಗೆ FSSAI ಕಳವಳ ವ್ಯಕ್ತಪಡಿಸಿದ್ದು, ಪ್ಲಾಸ್ಟಿಕ್ ಬಳಕೆಯು ಆಹಾರದ ಗುಣಮಟ್ಟವನ್ನು ಹಾಳು ಮಾಡುತ್ತದೆ ಮತ್ತು ಗ್ರಾಹಕರ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ FSSAI ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read