alex Certify ಪದವೀಧರರಿಗೆ ಸಿಹಿ ಸುದ್ದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರರಿಗೆ ಸಿಹಿ ಸುದ್ದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ; ಇಲ್ಲಿದೆ ಡಿಟೇಲ್ಸ್

ಬ್ಯಾಂಕ್ ಆಫ್ ಇಂಡಿಯಾ (BOI) 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಮಾರ್ಚ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 15 ಕೊನೆಯ ದಿನಾಂಕವಾಗಿದೆ.

ಯಾವುದೇ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ, 2021 ಏಪ್ರಿಲ್ 1 ರಿಂದ 2025 ಜನವರಿ 1 ರ ನಡುವೆ ಪದವಿಯನ್ನು ಪಡೆದಿರಬೇಕು. ಹಾಗೆಯೇ ಅರ್ಜಿದಾರರ ವಯಸ್ಸು ಜನವರಿ 1, 2025 ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿದೆ: ಮೊದಲಿಗೆ ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಸಾಮಾನ್ಯ/ಹಣಕಾಸು ಅರಿವು, ಇಂಗ್ಲಿಷ್ ಭಾಷೆ, ಪರಿಮಾಣಾತ್ಮಕ ಮತ್ತು ತಾರ್ಕಿಕ ಆಪ್ಟಿಟ್ಯೂಡ್ ಹಾಗೂ ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ 100 ಪ್ರಶ್ನೆಗಳಿರುತ್ತವೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕವು PwBD ಅಭ್ಯರ್ಥಿಗಳಿಗೆ ರೂ. 400 + GST, SC/ST/ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ರೂ. 600 + GST ಮತ್ತು ಇತರ ಅಭ್ಯರ್ಥಿಗಳಿಗೆ ರೂ. 800 + GST ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...