
ಹಾವೇರಿ: ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜೈಲುಕಾರಗೃಹದಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ. ಕೋಟೆಪ್ಪ ಅಂಬಿಗೇರ್ (42) ಆತ್ಮಹತ್ಯೆಗೆ ಶರಣಾಗಿರುವ ಖೈದಿ. ಮೃತ ಕೋಟೆಪ್ಪ ಅಂಬಿಗೇರ್, 6 ವರ್ಷಗಳ ಹಿಂದೆ ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಆದರೆ ಆತನಿಗೆ ಜಾಮೀನು ಸಿಕ್ಕಿರಲಿಲ್ಲ.
ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.