
ಉಡುಪಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಸಮ್ಮುಖದಲ್ಲಿಯೇ ಹೇಳಿಕೆ ನೀಡಿದ್ದಾರೆ. ಡಿಕೆಗೆ ಮೊದಲ ಬಾರಿ ಟಿಕೆಟ್ ಕೊಡಿಸಿದವನೇ ನಾನು. ಇವತ್ತು ಯಶಸ್ವಿ ನಾಯಕರಾಗಿ ಡಿಕೆ ಮೂಡಿ ಬಂದಿದ್ದಾರೆ. ಡಿ.ಕೆ ಶಿವಕುಮಾರ್ ಸದ್ಯದಲ್ಲಿಯೇ ಮುಖ್ಯಮಂತ್ರಿ ಆಗಬೇಕು. ಡಿ.ಕೆ. ಶಿವಕುಮಾರ್ ಅವರು ಗೋಮಟೇಶ್ವರನಂತೆ ಬೆಳೆಯಲಿ ಎಂದು ಹೇಳಿದ್ದಾರೆ.
ಡಿ.ಕೆ. ಮುಖ್ಯಮಂತ್ರಿಯಾಗುವುದು ತೀರ್ಮಾನವಾಗಿರುವ ವಿಷಯ. ಡಿ.ಕೆ. ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಹೇಳಿಕೆಗಳು ಬರಬಹುದು, ಹೋಗಬಹುದು ಎಂದು ಮೊಯ್ಲಿ ಹೇಳಿದ್ದಾರೆ.
ಡಿಕೆ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಡಿಕೆಯವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಡಿಕೆ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಸಿಎಂ ಹುದ್ದೆ ಯಾರೂ ಕೊಡುವ ವರ ಅಲ್ಲ, ಅದು ಡಿ.ಕೆ. ಶಿವಕುಮಾರ್ ಸಂಪಾದನೆ ಮಾಡಿರುವ ಶಕ್ತಿಯಾಗಿದೆ. ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಈ ಪುಣ್ಯಭೂಮಿಯಲ್ಲಿ ಆಡಿದ ಮಾತು ನೂರಕ್ಕೆ ನೂರರಷ್ಟು ಸತ್ಯ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆಗೆ ಸಿಎಂ ಹುದ್ದೆ ತಪ್ಪಿಸಲು ಆಗುವುದಿಲ್ಲ. ಡಿಕೆ ಮುಖ್ಯಮಂತ್ರಿ ಆಗುವುದು ಶತಃಸಿದ್ಧ ಎಂದಿದ್ದಾರೆ.
ನೀವು ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪಿಲ್ಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ದೇವರ ಭೂಮಿಯಾಗಿದೆ. ಆದರೆ ಬಿಜೆಪಿ ದೇವರ ಭೂಮಿಯನ್ನು ರಣಭೂಮಿ ಮಾಡಿದೆ ಎಂದು ಮೊಯ್ಲಿ ಹೇಳಿದ್ದಾರೆ.