
ಪುತ್ತೂರು: ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೊಮ್ಮಗ ಮತ್ತು ಅಜ್ಜಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಮಂಜಲ್ಪಡು ಬಳಿ ಅಪಘಾತ ಸಂಭವಿಸಿದೆ.
ಜಮೀನಾ(49) ತಂಸೀರ್(4) ಮೃತಪಟ್ಟವರು. ಆಟೋ ಚಾಲಕ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.