
ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿಂಗಪ್ಪ ಮಾದರ, ಯಮನಪ್ಪ, ಮಂಜುನಾಥಗೌಡ ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.