
ಬೆಂಗಳೂರು: ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ ದೃಷ್ಟಿಯಂದ ನಿಯಮಿತವಾಗಿ ಔಷಧಗಳ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸುತ್ತಿದ್ದಾರೆ. ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.