ಆಂಧ್ರಪ್ರದೇಶ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಪಿ.ವಿ. ಸುನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಿದೆ. ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸರ್ಕಾರದ ಪೂರ್ವಾನುಮತಿ ಪಡೆಯದೆ ವಿದೇಶ ಪ್ರವಾಸ ಕೈಗೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿಜಿಪಿ ಶ್ರೇಣಿಯ ಅಧಿಕಾರಿಯಾಗಿರುವ ಪಿ.ವಿ. ಸುನಿಲ್ ಕುಮಾರ್ ಅವರು ಹುದ್ದೆ ನಿರೀಕ್ಷೆಯಲ್ಲಿದ್ದರು. ಆದರೆ, ಸರ್ಕಾರದ ಅನುಮತಿ ಪಡೆಯದೆ ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ.