ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿಧಾನಸೌಧದ ಮುಂದೆ ಸಾಲು ಸಾಲು ಪ್ರತಿಭಟನೆಗಳು ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜೆಡಿಎಸ್ ಕಾರ್ಯಕರ್ತರು ‘ಗೃಹಲಕ್ಷ್ಮಿ’ ಹಣ ಬಿಡುಗಡೆಗೆ ಆಗ್ರಹಿಸಿ ಕ್ಯಾಲೆಂಡರ್ ಹಿಡಿದು ಪ್ರತಿಭಟನೆ ನಡೆಸಲಿದ್ದಾರೆ. ಅದೇ ರೀತಿ ಬಿಜೆಪಿ ಕೂಡ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದೆ.ವಿಧಾನಸೌಧದ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.