
ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗೈಸಿದರು. ಬಳಿಕ ವಿಧಾನಸೌಧದಲ್ಲಿ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದರು.
ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಹ ಯೋಜನೆಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಆರೋಪಿಸಲಾಗಿತ್ತು. ಆದರೆ ಅದು ಸುಳ್ಳು ಎಂಬುದನ್ನು ಸರ್ಕಾರ ಸಾಬೀತು ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಸರ್ಕಾರ ವೇಗವಾಗಿ ಅಭಿವೃದ್ದಿ ಕೆಲಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.