ಬೆಂಗಳೂರು : ರಾಜ್ಯದ ಆಯವ್ಯಯ ಅಭಿವೃದ್ದಿಯಾಗುತ್ತಿದೆ, ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದರಿಂದ ಉತ್ತಮ ಬೆಳೆ ಬಂದಿದೆ ಎಂದು ರಾಜ್ಯಪಾಲ ಗೆಹ್ಲೋಟ್ ಹೇಳಿದರು.
ಬಜೆಟ್ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರ ಕಟ್ಟಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿದೆ. ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ಮುಂದಿದೆ. ಎಲ್ಲಾ ಆರೋಪಗಳನ್ನು ಸುಳ್ಳು ಎಂದು ಸರ್ಕಾರ ನಿರೂಪಿಸಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಪ್ರಯೋಜನವಾಗಿದೆ. ಕತ್ತಲಿನಲ್ಲಿ ಇರುವವರಿಗೆ ಸರ್ಕಾರ ಬೆಳಕು ನೀಡಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಆಗಿದೆ ಎಂದು ಹೇಳಿದರು.
ನಮ್ಮ ಸರ್ಕಾರ ವೇಗದ ಗತಿಯಲ್ಲಿ ಕೆಲಸ ಮಾಡುತ್ತಿದೆ. ಹಲವು ಅಭ್ಯುದಯಗಳಿಗೆ ಸಾಕ್ಷಿಯಾಗಿದೆ. ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಆರೋಪಿಸಲಾಗಿತ್ತು. ಆದರೆ ಅದು ಸುಳ್ಳು ಎಂಬುದನ್ನು ಸರ್ಕಾರ ಸಾಬೀತು ಮಾಡಿದೆ ಎಂದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗೈಸಿದರು. ಬಳಿಕ ವಿಧಾನಸೌಧದಲ್ಲಿ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದರು.