ಬೆಂಗಳೂರು : ಮೈಸೂರು ರಸ್ತೆಯ ಅತ್ತಿಗುಪ್ಪೆಯಲ್ಲಿ ನಮ್ಮ ಮೆಟ್ರೋ ರೈಲು ಕೆಟ್ಟು ನಿಂತಿದ್ದು, ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ.
ನಮ್ಮ ಮೆಟ್ರೋ ರೈಲು ಕೆಟ್ಟು ನಿಂತ ಪರಿಣಾಮ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ. ಪ್ರಯಾಣಿಕರು ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೆಲವು ನಿಮಿಷಗಳಿಂದ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ನಿಂತಲ್ಲೇ ನಿಂತಿದ್ದು, ಮೆಜೆಸ್ಟಿಕ್ ಹೋಗುವ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.