ಬಳ್ಳಾರಿ : ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಮಾ.05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಸಂಜೀವಿನಿ-ಕೆ.ಎಸ್.ಎಲ್.ಪಿ.ಎಸ್.ಡಿಡಿಯುಜಿಕೆವೈ ಯೋಜನೆಯಡಿ ಆಯೋಜಿಸಲಾಗುತ್ತಿದ್ದು, ಉದ್ಯೋಗ ಮೇಳದಲ್ಲಿ ಸುಮಾರು 30 ರಿಂದ 40 ಕಂಪನಿಗಳು ಭಾಗವಹಿಸಲಿವೆ. ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
*ವಿದ್ಯಾರ್ಹತೆ
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ಗೆ ಭೇಡಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.