ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.15 ರ ವರೆಗೆ ವಿಸ್ತರಿಸಲಾಗಿದೆ.
ಕೋರ್ಸ್ಗಳ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುವ ಕಾರಣ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ಬಂದ ಕಾರಣ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿಗಳು ಸಲ್ಲಿಕೆಯಾಗದ ಕಾರಣ ಅವಧಿ ವಿಸ್ತರಿಸಲಾಗಿದೆ.ಅರ್ಜಿ ಸಲ್ಲಿಸಲು ಆನ್ಲೈನ್ ವೆಬ್ಸೈಟ್ ವಿಳಾಸ https://ssp.postmatric.karnataka.gov.in/ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.