
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಬಗ್ಗೆ ಗೊಂದಲ ಬೇಡ, ಯೋಜನೆ ಫಲಾನುಭವಿಗಳಿಗೆ 5 ವರ್ಷವೂ ಹಣ ತಲುಪಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.