ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ಗಳನ್ನು ಪರೀಕ್ಷರಣೆ ಮಾಡಲಾಗಿದ್ದು, ಆ ಪೈಕಿ 1.65 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ಗೆ ಸೇರಿಸಲಾಗಿದೆ ಎಂದರು.