ಬೆಂಗಳೂರು : ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಇನ್ಮುಂದೆ ಸರ್ಕಾರದ ಸಹಮತಿ ಕಡ್ಡಾಯ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಇನ್ಮುಂದೆ ಸರ್ಕಾರದ ಸಹಮತಿ ಕಡ್ಡಾಯ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ತಿಳಿಸಿದ್ದಾರೆ.
ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಅಧಿಕಾರಿಗಳ ಮೇಲೆ ಕ್ರಮ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂ.ಎಸ್.ಪಿ) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತೀ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಎಂ.ಎಸ್.ಪಿ.ಯ ಅಧ್ಯಕ್ಷರಾಗಿದ್ದು, ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.