
ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.
ಐಶ್ವರ್ಯಾ ಮಹೇಶ್ ಲೋಹಾರ(18) ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪ್ರಿಯಕರ ಪ್ರಶಾಂತ ಯಲ್ಲಪ್ಪ ಕುಂಡೇಕರ(29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಂಜೆ 5 ಗಂಟೆಗೆ ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಇವರು ಬಂದಿದ್ದರು. ಮೊದಲು ಐಶ್ವರ್ಯಾ, ಪ್ರಶಾಂತ್ ವಿಷ ಸೇವಿಸಲು ಯತ್ನಿಸಿದ್ದರು. ನಂತರ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾ ಕತ್ತು ಸೀಳಿ ಕೊಲೆ ಮಾಡಿದ ಪ್ರಶಾಂತ್ ಬಳಿಕ ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.