
ಬೆಳಗಾವಿ: ಕುಡುಕ ಪತಿಯ ಕಾಟಕ್ಕೆ ಬೇಸತ್ತ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಈ ಘಟನೆ ನಡೆದಿತ್ತು. ತಾಯಿ ಶಾರದಾ ಹಾಗೂ ಇಬ್ಬರು ಮಕ್ಕಳಾದ ಅಮೃತಾ, ಆದರ್ಶ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಅನುಕ್ಷಾ ಡಾಳೆ ಎಂಬ ಓರ್ವ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಅನುಕ್ಷಾ ಕೂಡ ಕೊನೆಯುಸಿರೆಳೆದಿದ್ದಾಳೆ.
ಶಾರದಾ ಪತಿ ಅಶೋಕ್ ಡಾಳೆ ಪ್ರತಿದಿನ ಕುಡಿದುಬಂದು ಹಿಂಸಿಸುತ್ತಿದ್ದ. ಹೊಡೆಯುವುದು, ಕಿರುಕುಳ ನೀಡುವುದು ಮಾಡುತ್ತಿದ್ದ. ಇದರಿಂದ ನೊಂದ ಶಾರದಾ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.