HomeKarnatakaಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಹೆಣ್ಣುಮಗು ಹತ್ಯೆಗೆ...

ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಹೆಣ್ಣುಮಗು ಹತ್ಯೆಗೆ ಯತ್ನ

ಶಿವಮೊಗ್ಗ: ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಪತ್ನಿ ಮೇಲೆ ಪತಿ ಮಹಾಶಯ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದಲ್ಲಿ ನಡೆದಿದೆ.

ಪತಿ ಕಿರಣ್ ಹಾಗೂ ಆತನ ಕುಟುಂಬಸ್ಥರು ಪತ್ನಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಮನಬಂದಂತೆ ಹೊಡೆದಿದ್ದು, ಮುಖದ ಮೇಲೂ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಹುಟ್ಟಿದ ಹೆಣ್ಣುಮಗವನ್ನು ಕೊಲ್ಲಲು ಕಿರಣ್ ಯತ್ನಿಸಿದ್ದಾನೆ.

ಗಂಭೀರವಾಗಿ ಹಲ್ಲೆಗೊಳಗಾಗಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಕಿರಣ್ ಹಾಗೂ ಆತನ ಪೋಷಕರು, ಸಹೋದರಿ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular