ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ವಿಸ್ಮಯಾ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
6.5 ಲಕ್ಷ ರೂಪಾಯಿ ಸಾಲ ಪಡೆದು ಹಿಂದಿರುಗಿಸದ ಆರೋಪ ವಿಸ್ಮಯಾ ವಿರುದ್ಧ ಕೇಳಿಬಂದಿದೆ. 6.5 ಲಕ್ಷ ಸಾಲ ಪಡೆದು ವಂಚಿಸಿರುವ ಆರೋಪ ಹಿನ್ನೆಲೆಯಲ್ಲಿ ಹಿಮಾನ್ವಿ ಎಂಬುವವರು ಕೋರ್ಟ್ ಗೆ ಖಾಸಗಿ ದೂರು ದಾಖಲಿಸಿದ್ದರು.
ನ್ಯಾಯಾಲಯದ ನಿರ್ದೇಶನದಂತೆ ವಿಸ್ಮಯಾ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.