
ಜಲ್ನಾ: ಸ್ವಯಂ ಘೋಷಿತ ದೇವಮಾನವನಿಬ್ಬ ನೀಡುತ್ತಿದ್ದ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ 45 ವರ್ಷದ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಮಹಿಳೆ ಹಾಗೂ ಆಕೆಯ ಪತಿ ನೆರೆಯ ಬುಲ್ದಾನಾ ಜಿಲ್ಲೆಯ ಧಮನ್ ಗಾಂವ್ ನಲ್ಲಿರುವ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಸ್ವಯಂ ಘೋಷಿತ ದೇವಮಾನವನನ್ನು ಭೇಟಿ ಯಾಗಿದ್ದರು. ಬಳಿಕ ಆತನ ಪದೇ ಪದೇ ವ್ಯಕ್ತಿಯ ಕುಟುಂಬವನ್ನು ಸಂಪರ್ಕಿಸಿ ಹಲವು ಬೇಡಿಕೆಗಳನ್ನು ಇಡತೊಡಗಿದ್ದ. ಬೇಡಿಕೆಗೆ ಒಪ್ಪದಿದ್ದಾಗ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ವ್ಯಕ್ತಿಯ ಪತ್ನಿಗೂ ಕಿರುಕುಳ ನೀಡುತ್ತಿದ್ದ.
ಈ ಘಟನೆಗಳಿಂದ ಮನನೊಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ನಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವನನ್ನು ಬಂಧಿಸಲಾಗಿದೆ.