ಬೆಂಗಳೂರು : ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮ
ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.