
ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ಬಳಿ ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.
ಬ್ರಿಮ್ಸ್ ಸೂಪರ್ ವೈಸರ್ ಪ್ರಕಾಶ್ ಮಾಳಗೆ ವಿರುದ್ಧ ಮಹಿಳೆ ಆರೋಪ ಮಾಡಿದ್ದು, ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ.
ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದ್ದು, ಈ ವೇಳೆ ಮಹಿಳಾ ಸಿಬ್ಬಂದಿ ಆಸ್ಪತ್ರೆ ಸೂಪರ್ ವೈಸರ್ ಪ್ರಕಾಶ್ ವಿರುದ್ಧ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ. ತನಗೆ ನ್ಯಾಯ ಕೊಡಿಸುವಂತೆ ಮಹಿಳಾ ಆಯೋಗ ಅಧ್ಯಕ್ಷೆ ಕಾಲಿಗೆ ಬಿದ್ದು ಕೇಳಿಕೊಂಡಿದ್ದಾರೆ.
ಆರೋಪಿ ಪ್ರಕಾಶ್ ತನ್ನ ಮಾತು ಕೇಳದಿದ್ದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಾನೆ. ಕೆಲಸ ಮಾಡಿದರೂ ಹಾಜರಿ, ಸಂಬಳ ಕೊಡುತ್ತಿಲ್ಲ ಎಂದು ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಬ್ರಿಮ್ಸ್ ನಿರ್ದೇಶಕರಿಗೆ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಸೂಚಿಸಿದ್ದಾರೆ.