ಬೆಂಗಳೂರು : ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರಗಳ ಕಿಟ್ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಆರೋಪಿಯನ್ನು ಬಂಧಿಸಿ, ಕಾನೂನಿನ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕರು ಆರೋಪಕ್ಕೆ ಸಂಬಂಧಿಸಿದಂತೆ ಅವರು ವಿಡಿಯೋ- ಆಡಿಯೋ ರೆಕಾರ್ಡ್ಗಳನ್ನು ಸಾಕ್ಷಿಯಾಗಿ ನೀಡಿದರೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಇಂತಹ ಘಟನೆ ಕುರಿತು ನಾವು ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ. ಬಡವರಿಗೆ, ಮಕ್ಕಳಿಗೆ ಅಥವಾ ಬಾಣಂತಿಯರಿಗೆ ತಲುಪಬೇಕಾದ ಸವಲತ್ತುಗಳು ವಂಚಕರ ಪಾಲಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದರು.