
14 ವರ್ಷದ ಬಾಲಕಿಯನ್ನು ಕಿಡ್ಯಾಪ್ ಮಾಡಿರುವ ದುಷ್ಕರ್ಮಿಗಳು ಆಕೆಯನ್ನು ಎರಡು ತಿಂಗಳ ಕಾಲ ಕೂಡಿ ಹಾಕಿ ನಿರಂತರ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.
ಟೈಲರ್ ಮನೆಗೆ ಹೋಗಿ ಬರುತ್ತಿದ್ದ ಬಾಲಕಿಯನ್ನು ನಲವರು ಕಾಮುಕರು ಅಪಹರಿಸಿದ್ದಾರೆ. ಬಳಿಕ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೋಣೆಯೊಂದರಲ್ಲಿ ಕೂಡಿಹಾಕಿ ಎರಡು ತಿಂಗಳ ಕಾಲ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಸಂತ್ರಸ್ತೆಯ ಕೈ ಮೇಲೆ ಇದ್ದ ಓಂ ಟ್ಯಾಟೂವನ್ನು ಆಸಿಡ್ ಹಾಕಿ ಸುಟ್ಟು ಹಾಕಿದ್ದಾರೆ.
ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಸದ್ಯ ಬಾಲಕಿಯನ್ನು ಪತ್ತೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ.
ಆರೋಪಿಗಳಾದ ಸಲ್ಮಾನ್, ಜುಬೈರ್, ರಶೀದ್ ಹಾಗೂ ಆರಿಫ್ ಎಂಬುವವರೇ ಈ ನೀಚ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದೆ. ಭಗತ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.